ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

(ನ್ಯೂಸ್ ಕಡಬ)newskadaba.com ಅರಂಬೂರು, ಅ. 05.  ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ  ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ಅಧ್ಯಕ್ಷತೆ ವಹಿಸಿ, ಮಾತನಾಡಿ, ಎನ್ಎಸ್ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿದೆ. ಇಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು  ಜೀವನದಲ್ಲಿ ಯಶಸ್ಸು ಪಡೆಯಲು ಕರೆ ನೀಡಿದರು.

Also Read  ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

ಮುಖ್ಯ ಅತಿಥಿಗಳಾಗಿ ಸುಳ್ಯ ಕ್ಷೇತ್ರ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಸಂಧ್ಯಾ ಕುಮಾರಿ, ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀಪತಿ ಭಟ್ ಮಜಿಗುಂಡಿ,ಶಾಲಾ ಎಸ್ ಡಿಎಂಸಿ ಅಧ್ಯಕ್ಷರ ಶ್ರೀ ರಮೇಶ್,ಶಾಲಾ  ಮುಖ್ಯೋಪಾಧ್ಯಯನಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಸುರೇಶ್ ವಾಗ್ಲೆ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ. ವಂದಿಸಿದರು. ಉಪನ್ಯಾಸಕರಾದ ಮೋಹನ್ ಚಂದ್ರ ನಿರೂಪಿಸಿದರು. ಶಿಬಿರಾರ್ಥಿಗಳು ಪ್ರಾರ್ಥಿಸಿದರು. ಶಿಬಿರದಲ್ಲಿ 67 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

error: Content is protected !!
Scroll to Top