ಕಡಬ: ಸಿನಿಮೀಯ ಶೈಲಿಯಲ್ಲಿ ಬೈಕಿಗೆ ಢಿಕ್ಕಿ ಹೊಡೆದ ಕಾರು



(ನ್ಯೂಸ್ ಕಡಬ) newskadaba.com ಕಡಬ, ಅ.05. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.







ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top