(ನ್ಯೂಸ್ ಕಡಬ)newskadaba.com ಕೊಪ್ಪಳ, ಅ. 05. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿದ ಘಟನೆ ಗಂಗಾವತಿ ತಾಲೂಕಿನ ಢಣಾಪುರದಲ್ಲಿ ನಡೆದಿದೆ.
ಮಣ್ಣಿನಡಿ ಸಿಲುಕಿದ ವ್ಯಕ್ತಿಯನ್ನು ಪ್ರಕಾಶ ಎಂಬವರನ್ನು ಗ್ರಾಮಸ್ಥರು ತೆರವು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಅವರನ್ನು ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದ ಶ್ರೀರಾಮನಗರ, ಢಣಾಪುರ ಸೇರಿದಂತೆ ಇತರ ಗ್ರಾಮಗಳಲ್ಲಿ ಮನೆಗಳು ಕುಸಿದಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
