ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಡೆಹ್ರಾಡೂನ್, . 05ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮದುವೆ ದಿಬ್ಬಣ ಹೊರಟಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದು ಸುಮಾರು 30 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ಬಸ್ ಹರಿದ್ವಾರದ ಲಾಲ್ದಾಂಗ್ನಿಂದ ಪೌರಿಯ ಬಿರೋನ್ಖಾಲ್ಗ್ರಾಮಕ್ಕೆ ಬಸ್ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ʼʼಬಿರೋನ್ಖಾಲ್ಗ್ರಾಮದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ಕಮರಿಗೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆʼʼ ಎಂದು ಮೂಲಗಳು ತಿಳಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಮಂಡಿ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಆಳವಾದ ಕಮರಿಗೆ ಬಿದ್ದಿದೆ. ವೇಳೆ ಬಸ್ನಲ್ಲಿ ಒಟ್ಟು 40-50 ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Also Read  ಏಲಕ್ಕಿ ಕೆ.ಜಿ ಗೆ 2,900 ರೂ.➤ ಬೆಳೆಗಾರರ ಮೊಗದಲ್ಲಿ ಮಂದಹಾಸ

error: Content is protected !!