ಚಲಿಸುತ್ತಿದ ಬಸ್ ನಲ್ಲಿ ಬೆಂಕಿ: ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, . 05: ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದ್ದಾರೆ.

ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು.ಬಸ್‌ನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

Also Read  ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು

error: Content is protected !!
Scroll to Top