ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.comಬೆಂಗಳೂರು, . 05. : ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Also Read  ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ - ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ   

error: Content is protected !!
Scroll to Top