ಕಾಡಾನೆಗಳ ಹಾವಳಿ: ಕೃಷಿಗೆ ಹಾನಿ

ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 05. ಧರ್ಮಸ್ಥಳ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ. ಶುಕ್ರವಾರ ರಾತ್ರಿಯ ವೇಳೆ ಧರ್ಮಸ್ಥಳ ಪೊಲಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಮರಗೆಣಸಿನ ಗಿಡಗಳನ್ನು ನಾಶಗೊಳಿಸಿದೆ.

ತೋಟದಲ್ಲಿದ್ದ ಬಾಳೆಗಿಡಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದ್ದು ಮನೆಯ ಸಮೀಪವೇ ಆನೆಗಳು ಓಡಾಟ ನಡೆಸಿದ್ದು ಜನರಲ್ಲಿ ಭಯಮೂಡಿಸಿದೆ. ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ನಿವಾಸಿ ಕ್ಸೇವಿಯರ್ ಎಂಬವರಿಗೆ ಸೇರಿದ ತೋಟಕ್ಕೆ ನುಗ್ಗಿದ ಕಾಡಾನೆಗಳು ಕೃಷಿಗೆ ಹಾನಿಯುಂಟುಮಾಡಿದೆ. ಇಲ್ಲಿನ ನೇರ್ತನೆ ರಸ್ತೆಯ ಪಕ್ಕದಲ್ಲಿಯೇ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಸಂಜೆಯಾದರೆ ಜನರು ಮನೆಗಳಿಂದ ಹೊರಬರಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ.

Also Read  ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ

 

error: Content is protected !!
Scroll to Top