ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ. ಬಂಧಿತರು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

 

error: Content is protected !!
Scroll to Top