ಮಂಗಳೂರು: 2009 ರಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ► ಮುತಾಲಿಕ್ ಸೇರಿ 26 ಮಂದಿ ಆರೋಪಿಗಳು ಖುಲಾಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.13. 2009ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರದ ಕೊರತೆಯಿಂದಾಗಿ ಎಲ್ಲಾ 26 ಮಂದಿ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದೆ.

ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ 2009 ರ ಜನವರಿ 24ರಂದು ನಡೆದಿದ್ದ ಪಬ್ ದಾಳಿ ಪ್ರಕರಣದ ಬಗ್ಗೆ ಸುದೀರ್ಘ ವಿಚಾರಣೆಯ ಬಳಿಕ ಸಾಕ್ಷ್ಯಾಧಾರ ಕೊರತೆಯಿಂದಾಗಿ ಪ್ರಮುಖ ಆರೋಪಿಗಳಾದ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ, ಸುಭಾಸ್ ಪಡೀಲ್, ದಿನಕರ ಶೆಟ್ಟಿ ಸೇರಿದಂತೆ 26 ಆರೋಪಿಗಳನ್ನು ನಿರಪರಾಧಿಗಳೆಂದು ಘೋಷಿಸಿ ನ್ಯಾಯಾಲಯ ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಶ್ಲಾಘಿಸಿದ್ದಾರೆ.

Also Read  ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ

error: Content is protected !!
Scroll to Top