ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.ಸೇತುವೆ ಆಸುಪಾಸಿನಲ್ಲಿ ಮುಳುಗುತಜ್ಞ ಈಶ್ವರ ಮಲ್ಪೆ ಸಹಿತ 7 ಸ್ಕೂಬಾ ಡೈವರ್‌ಗಳು, ಎನ್‌ಡಿಆರ್‌ಎಫ್‌ ತಂಡ ಹುಡುಕಾಟ ನಡೆಸುತ್ತಿದ್ದರು.ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

Also Read  ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ

error: Content is protected !!
Scroll to Top