ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ

(ನ್ಯೂಸ್ ಕಡಬ)newskadaba.com,ಮೈಸೊರು ಅ. 07. ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು.


ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ ಶೇ.10 ರಷ್ಟು ರಿಯಾಯಿತಿ ದರದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದರು.

Also Read  ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

error: Content is protected !!
Scroll to Top