ತಿರುಪತಿ ಲಡ್ಡು ಪ್ರಸಾದವನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಟಿಟಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಅ. 07. ನಗರಕ್ಕೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ತಿರುಪತಿಯಲ್ಲಿ ಬ್ರಹ್ಮೋತ್ಸವ ನಡೆಯುತ್ತಿರುವುದರಿಂದ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ.

ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಪೂರೈಕೆ ಮಾಡುವುದಿಲ್ಲ. ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾಗುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿರುಪತಿ ಲಡ್ಡು ವಿವಾದ ಮಧ್ಯೆಯೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್‌ಗೆ ಟಿಟಿಡಿ ಮನವಿ ಮಾಡಿಕೊಂಡಿತ್ತು.

Also Read  ಇಂದು ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ➤ಪ್ರತೀ ಖರೀದಿಗೆ 15% ಡಿಸ್ಕೌಂಟ್ ಜೊತೆಗೆ ರೂ. 999 ರ ಖರೀದಿಗೆ ಉಚಿತ ಲಕ್ಕಿ ಕೂಪನ್

 

error: Content is protected !!
Scroll to Top