ಮನೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದವನ ಬಂಧನ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಮನೆಗಳ ಬೀಗ ಮುರಿದು ಹಣ- ಆಭರಣ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ರೂ. ಬೆಲೆಬಾಳುವ 475 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಂಜುನಾಥ ಅಲಿಯಾಸ್‌‍ ಪಾರಿವಾಳ ಮಂಜ(38) ಬಂಧಿತ ಆರೋಪಿ. ಈತ ಈ ಹಿಂದೆ ನಗರದ ನಗರ್ತಪೇಟೆಯ, ತಿಗಳರಪೇಟೆಯಲ್ಲಿ ವಾಸವಾಗಿದ್ದನು. ಈಗ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಕುಂಡಪಲ್ಲಿ ಗ್ರಾಮದಲ್ಲಿ ನೆಲೆಸಿದ್ದಾನೆ. ಚಿಕ್ಕಪೇಟೆಯ, ಮಾಣಿಕ್‌ ಮೇವಾ ಅಂಗಡಿ ಸಮೀಪದ ನಿವಾಸಿ ಉಪೇಶ್‌ ಭಂಡಾರಿ ಅವರ ಮನೆಯ ಬೀಗ ಮುರಿದು ಒಳನುಗ್ಗಿ 105 ಗ್ರಾಂ ಚಿನ್ನಾಭರಣ ಕಳ್ಳತನವಾಗಿದ್ದ ಬಗ್ಗೆ ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Also Read  ಕಡಬ: ವಿಹಿಂಪ ವತಿಯಿಂದ ಮಂಡ್ಯ ಗೋಶಾಲೆಗೆ ಅಶಕ್ತ ಗೋವುಗಳ ಹಸ್ತಾಂತರ

error: Content is protected !!
Scroll to Top