ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ”

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮಾನ್ಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಶ್ರೀ ಕಾಂತರಾಜು ಅವರು ತಿಳಿಸಿದ್ದಾರೆ.

Also Read  ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ , ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

Also Read  ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ  ➤ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ವಿದ್ಯಾರ್ಥಿನಿ.!!

error: Content is protected !!
Scroll to Top