ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಇಳಿಕೆ ಕಂಡ ಚಿನ್ನದ ದರ – News Kadaba

ಮತ್ತೆ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಹಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಸ್ವಲ್ಪವೇ ಇಳಿಕೆಯಾಗಿತ್ತು. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 19 ರೂ. ಮತ್ತು ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 21 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,745 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,000 ರೂ. ಮತ್ತು 100 ಗ್ರಾಂಗೆ 7,10,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,450 ರೂ. ಮತ್ತು 100 ಗ್ರಾಂಗೆ 7,74,500 ರೂ. ಪಾವತಿಸಬೇಕಾಗುತ್ತದೆ.

 

Scroll to Top