ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ

(ನ್ಯೂಸ್ ಕಡಬ)newskadaba.com,. 08. ಬೆಂಗಳೂರುಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರ್ಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲು 3 ತಿಂಗಳಲ್ಲಿ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

Also Read  ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ - ಇಂಧನ ಸಚಿವರ ಸಮರ್ಥನೆ..!

error: Content is protected !!
Scroll to Top