12 ದಿನಗಳ ಹಸುಗೂಸನ್ನು ಬೆಂಕಿಯಲ್ಲಿ ಸುಟ್ಟು ಕೊಂದ ಪಾಪಿ ತಾಯಿ ► ಕಾರಣ ತಿಳಿದರೆ ನೀವು ಬೆಚ್ಚಿ ಬೀಳುತ್ತೀರಾ…

(ನ್ಯೂಸ್ ಕಡಬ) newskadaba.com ಭಟ್ಕಳ, ಮಾ.13. ಕೇವಲ 12 ದಿನದ ಹಸುಗೂಸನ್ನು ತಾಯಿಯೇ ಬೆಂಕಿ ಹಚ್ಚಿ ಸುಟ್ಟು ಹಾಕಿದ ಹೃದಯ ವಿದ್ರಾವಕ ಘಟನೆಯೊಂದು ಭಟ್ಕಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪಾಪಿ ತಾಯಿಯನ್ನು ಭಟ್ಕಳ ತಾಲೂಕಿನ ವೆಂಕಟಾಪುರ ನಿವಾಸಿ ಯಶೋಧಾ ಎಂದು ಗುರುತಿಸಲಾಗಿದೆ. ಈಕೆಯನ್ನು ಮೂರೂವರೆ ವರ್ಷಗಳ ಹಿಂದೆ ಭಟ್ಕಳದ ಬೆಳ್ನಿ ಎಂಬಲ್ಲಿನ ಗೋಪಾಲ್ ಮೊಗೇರ್ ಎಂಬವರ ಜೊತೆಗೆ ವಿವಾಹ ಮಾಡಿಕೊಡಲಾಗಿತ್ತು. ಹೆರಿಗೆಗೆಂದು ತನ್ನ ತವರು ಮನೆಯಾದ ವೆಂಕಟಾಪುರಕ್ಕೆ ತೆರಳಿದ್ದ ಯಶೋಧಾ, ಮಗು ಹೆಣ್ಣೆಂಬ ಕಾರಣಕ್ಕೆ ಹೆರಿಗೆಯಾಗಿ 12 ದಿನಗಳು ಕಳೆದರೂ ತನ್ನ ಪತಿ ಮಗುವನ್ನು ನೋಡಲು ಬಂದಿಲ್ಲ ಎಂದು ಮಾನಸಿಕವಾಗಿ ನೊಂದು ಮಾರ್ಚ್
9 ರಂದು ಮಗುವನ್ನು ಬೆಂಕಿ ಹಚ್ಚಿ ಸುಟ್ಟಿದ್ದಾಳೆ. ತೀವ್ರ ತರದಲ್ಲಿ ಸುಟ್ಟು ಗಾಯಗೊಂಡ ಹಸುಳೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಶನಿವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಮಾಹಿತಿ ತಿಳಿದ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

error: Content is protected !!
Scroll to Top