(ನ್ಯೂಸ್ ಕಡಬ)newskadaba.com, ಅ. 08.ಉಡುಪಿ: ನಾನು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿ ಎಂದು ಹರಿಯಾನದ ಸಿರ್ಸಾದ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ತಿಳಿಸಿದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಸಿಎಂ ಸ್ಥಾನಕ್ಕೆ ನಾನೇ ಸ್ಪರ್ಧಿ. ಆದರೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ ಎಂದಿದ್ದಾರೆ.
ಬಿಜೆಪಿ ದುರಾಡಳಿತ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದು ಹೇಳಿದರು.
Also Read ಸುಳ್ಯ: ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಸ್ಥಾನ ನೀಡಲು ಪ್ರಧಾನಿಗೆ ಪತ್ರ ಬರೆದ ನೀರಜಾಕ್ಷಿ ಕೆ.ಕೆ ನಾಯ್ಕ್
ಇಂದು ಬೆಳಗ್ಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಆದರೆ ಬಳಿಕ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಬಿಜೆಪಿ 47, ಕಾಂಗ್ರೆಸ್ 36, ಇತರರು 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುತ್ತಾರೆ.