​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ.

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ ಸಂಚಾರ ರಸ್ತೆಯನ್ನು ಕೆಲವು ಸಮಯದಿಂದ ತಾತ್ಕಾಲಿಕವಾಗಿ ಬಂದ್ ಮಾಡಿ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುವ ರಸ್ತೆಗೆ ಡೈವರ್ಟ್ ಮಾಡಲಾಗಿದೆ. ಈ ಡೈವರ್ಶನ್ ನಲ್ಲಿ ಅಪಘಾತ ಸಂಭವಿಸಿದೆ.

Scroll to Top