ಜಮ್ಮು ಕಾಶ್ಮೀರ: ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ

(ನ್ಯೂಸ್ ಕಡಬ)newskadaba.com,. 08.ಶ್ರೀನಗರ:  ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.

Also Read  ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ

error: Content is protected !!
Scroll to Top