(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) shp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ dom.karnataka.gov.in ವೀಕ್ಷಿಸಬಹುದು ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.