ಅ. 16 ರಂದು ಕಾವೇರಿ ಯೋಜನೆಯ 5ನೇ ಹಂತಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಯೋಜನೆಯ ಐದನೇ ಹಂತಕ್ಕೆ ಅ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ.

ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್’ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ. ಬೆಂಗಳೂರಿನ ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರುೋ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರಿಗೆ ಸಮಾರಂಭದ ಆಹ್ವಾನ ಪತ್ರಿಕೆ ನೀಡಿದರು.

Also Read  ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು

 

error: Content is protected !!
Scroll to Top