RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ

(ನ್ಯೂಸ್ ಕಡಬ)newskadaba.com,. ನವದೆಹಲಿ 09.: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬ ಮಾನಿಟರಿ ಪಾಲಿಸಿ ಕಮಿಟಿ ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.3 ದಿನ ನಡೆದ  ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

Also Read  ಕಡಬಕ್ಕೆ ಮತ್ತೆ ಕೊರೋನಾಘಾತ‼️ ➤ ಹೋಂಗಾರ್ಡ್ ಸೇರಿದಂತೆ ಇಬ್ಬರಿಗೆ ಕೊರೋನಾ ಪಾಸಿಟಿವ್

error: Content is protected !!
Scroll to Top