ಪದವು: ಆಟೋರಿಕ್ಷಾ ಪಲ್ಟಿ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಆಟೋ ರಿಕ್ಷಾವೊಂದು ಚರಂಡಿಗಿಳಿದು ಪಲ್ಟಿಯಾದುದರಿಂದ ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಸ್ತೆಯ ಪದವು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಪದವು ನಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ರಿಕ್ಷಾ ಎರ್ಮಾಳ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗಿಳಿದು ಪಕ್ಕದಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Scroll to Top