ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..!



(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 09. ಬೈಕ್ ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.







ಮೃತಪಟ್ಟ ಯುವಕನನ್ನು ಪೊಯಿನಾಚಿಯ ಮಣಿಕಂಠ (24) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ.






 

 

error: Content is protected !!
Scroll to Top