(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ, 50ಮೀ ಬಟರ್ ಫ್ಲೈ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ ಪದಕ, 4×100 ಮಿಡ್ಲೆ ರಿಲೇಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ. ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ. 2013 ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬೀ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ್ದಾರೆ.