(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಹರಿಯಾಣ ಸೋಲಿನ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾವು ಹರಿಯಾಣದ ಅನಿರೀಕ್ಷಿತ ಫಲಿತಾಂಶವನ್ನು ವಿಶ್ಲೇಷಿಸುತ್ತಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
‘ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’- ರಾಹುಲ್ ಗಾಂಧಿ
