ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಬೆಂಗಳೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಭಾರತ ಭೇಟಿಯಲ್ಲಿರುವ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರಿನಲ್ಲಿ ಇಂದು ಸಂಜೆ ಅವರು ಮಾಲ್ದೀವ್ಸ್‌ ಡಯಾಸ್ಪೋರಾವನ್ನು ಭೇಟಿಯಾಗಲಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮುಹಮ್ಮದ್ ಹಾಗೂ ಅವರ ನಿಯೋಗವನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಇತರರು ಆತ್ಮೀಯವಾಗಿ ಸ್ವಾಗತಿಸಿದರು.

Also Read  ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

 

error: Content is protected !!
Scroll to Top