ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು

crime, arrest, suspected

(ನ್ಯೂಸ್ ಕಡಬ)newskadaba.com,. 09 ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ,ಹೈದ್ರಾಬಾದ್ – ಇಬ್ಬರು, ಉತ್ತರ ಪ್ರದೇಶ – ಇಬ್ಬರು, ರಾಜಸ್ಥಾನದಲ್ಲಿ ಮೂವರು ಪಾಕಿಸ್ತಾನೀಯರನ್ನು ಬಂಧಿಸಿ ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಇನ್ನಷ್ಟು ಮಾಹಿತಿಗಳನ್ನು ತನಿಖಾ ತಂಡಗಳು ಕಲೆ ಹಾಕುತ್ತಿವೆ.

Also Read  ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ

ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹಿಂದೂ ಹೆಸರಿಟ್ಟುಕೊಂಡು ನೆಲೆಸಿದ್ದ ಪಾಕ್ ಪ್ರಜೆಗಳ ಬಂಧನದ ನಂತರ ವಿಚಾರಣೆ ಸಂದರ್ಭದಲ್ಲಿ ಅವರು ನೀಡಿದ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ದೇಶಾದ್ಯಂತ ಸಕ್ರಿಯರಾಗಿದ್ದ ಪಾಕಿಸ್ತಾನಿಯರನ್ನು ಬಂಧಿಸಿದ್ದಾರೆ.

error: Content is protected !!
Scroll to Top