(ನ್ಯೂಸ್ ಕಡಬ) newskadaba.com ಮುಂಬೈ, ಅ.10. ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಯೋಸಹಜ ಖಾಯಿಲೆಯಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
86 ವರ್ಷದ ರತನ್ ಟಾಟಾ ಅವರನ್ನು ಕಳೆದ ಸೋಮವಾರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ
ಅಧ್ಯಕ್ಷರಾಗಿ ಅಧಿಕಾರ ವಹಿಸಿದ್ದ ರತನ್ ಟಾಟಾ, ತನ್ನ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ ಗೌರವಾಧ್ಯಕ್ಷರಾಗಿ ಮುಂದುವರಿದಿದ್ದರು. ರತನ್ ಟಾಟಾ ನಿಧನಕ್ಕೆ ಪ್ರಧಾನಿ ನೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.