ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ – News Kadaba

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಎಲ್ಲಾ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಅಕ್ಟೋಬರ್ 18ರಂದು ಬೆಳಿಗ್ಗೆ 10:30 ರಿಂದ 1ಗಂಟೆಯ ವರೆಗೆ ಪುತ್ತೂರು ಪುರಭವನದಲ್ಲಿ ತರಬೇತಿ ನಡೆಯಲಿದೆ. ಮಂಗಳೂರು ಉಪ ವಿಭಾಗ ವ್ಯಾಪ್ತಿಯ ಎಲ್ಲಾ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top