(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ
