ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು  ಅಕ್ಟೋಬರ್ 10ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಇವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಶೋಭಾ ಬಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top