ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ

(ನ್ಯೂಸ್ ಕಡಬ)newskadaba.com, . 09 ಮಣಿಪುರ:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೆ ಜವಾಬ್ದಾರರು ಎಂದಿದ್ದಾರೆ.

Also Read  ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆ - ಅರ್ಜಿ ಆಹ್ವಾನ

error: Content is protected !!
Scroll to Top