(ನ್ಯೂಸ್ ಕಡಬ)newskadaba.com, ಅ. 09ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ‘ ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಕೈಗಾರಿಕೋದ್ಯಮಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು. ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರು ಬದುಕಿದ್ದಾಗ ನೀಡಲಾಗಿತ್ತು.