ಚಂಡಮಾರುತದಿಂದಾಗಿ ಹವಾಮಾನ ವೈಪರೀತ್ಯದ ಹಿನ್ನೆಲೆ ► ಸುಳ್ಯ ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ

ಸಾಂದರ್ಭಿಕ ಚಿತ್ರ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.14. ಕೇರಳ ಹಾಗೂ ಲಕ್ಷದ್ವೀಪಗಳಲ್ಲಿನ ಚಂಡಮಾರುತದ ಪರಿಣಾಮವಾಗಿ ಕರಾವಳಿ ಪ್ರದೇಶಗಳ ಅಲ್ಲಲ್ಲಿ ಮಳೆಯಾಗಿದ್ದು, ಸುಳ್ಯ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.

ಬುಧವಾರ ಸಂಜೆ ಸಮಯದಲ್ಲಿ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗಿದ್ದು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಯಿತು. ಕಡಬ ಪರಿಸರದಲ್ಲಿ ಬುಧವಾರ ಅಪರಾಹ್ನದಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಅರಬ್ಬೀ ಸಮುದ್ರದ ಆಗ್ನೇಯ ಭಾಗ ಮಾಲ್ಡೀವ್ಸ್ ಕರಾವಳಿ ಕಡೆಗೂ ವ್ಯಾಪಿಸಲಿದೆ’ ಎಂದು ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿತ್ತು.

Scroll to Top