ಬೈಕ್ ಅಪಘಾತ: ಸವಾರ ಮೃತ್ಯು..!



(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, . 11.  ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.







ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.






 

error: Content is protected !!
Scroll to Top