(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು: ಸಂಪಾಜೆಯ ಎರಡು ಮನೆಗಳಲ್ಲಿ ಚಿನ್ನಾಭರಣ ಮತ್ತು ಹಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು ಆರೋಪಿಗಳಿಬ್ಬರ ಆರೋಪ ಸಾಬೀತಾದ ಹಿನ್ನೆಲೆ ಇಬ್ಬರಿಗೂ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಅಹ್ಮದ್ ಕಬೀರ್ ಹಾಗೂ ಸಾಜುದೀನ್ ಫಾರೂಖ್ ಶಿಕ್ಷೆಗೆ ಒಳಗಾದ ಆರೋಪಿಗಳಾಗಿದ್ದರು.ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು, ದೋಷಿ ಎಂದು ಪರಿಗಣಿಸಲಾಗಿದೆ. ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.