ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 11. ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ  (ಲಿಡ್‍ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಾಗಿ ಅರ್ಜಿಗಳನ್ನು ನಿಗಮದ ವೆಬ್‍ಸೈಟ್ sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕರು ದೂರವಾಣಿ ಸಂಖ್ಯೆ 8762883941 ಸಂಪರ್ಕಿಸುವಂತೆ ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top