ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು



(ನ್ಯೂಸ್ ಕಡಬ)newskadaba.com,. 11 ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ.







ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು- ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಮಾರಾಮಾರಿ ಮಾಡಿಕೊಂಡಿದ್ದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಹಲ್ಲೆ ನಡೆಸಿದ್ದಾರೆ. ಪ್ರಯಾಣಿಕರ ಮೈಮೇಲೆ ಬಿದ್ದು ಪರಸ್ಪರ ಬಡಿದಾಡಿಕೊಂಡು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ. ಹೊಡೆದಾಡಿಕೊಂಡಿರುವ ಗಲಾಟೆಯ ದೃಶ್ಯ ಅದೇ ಖಾಸಗಿ ಬಸ್ಸಿನ ಸಿಸಿ ಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.






error: Content is protected !!
Scroll to Top