ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ – News Kadaba

ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಬೈರೂತ್, ಅ. 11.  ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಮೃತಪಟ್ಟಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ.

ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯ ಉಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ದಾಳಿ ಕುರಿತು ಸ್ಪೇನ್‌ ಹಾಗೂ ಇಟಲಿ ದೇಶಗಳು ಆಕ್ರೋಶ ಹೊರಹಾಕಿದ್ದು, ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿವೆ.

 

Scroll to Top