(ನ್ಯೂಸ್ ಕಡಬ) newskadaba.com ಅ. 11. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆಯೋಗವು ಇತ್ತೀಚೆಗೆ ವರದಿ ನೀಡಿತ್ತು. ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯ ಈ ಸಮಿತಿಯು ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ ಪಾಟೀಲ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಶರಣ ಪ್ರಕಾಶ್ ಪಾಟೀಲ ಅವರನ್ನು ಒಳಗೊಂಡಿದೆ.