ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು – News Kadaba

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ.


ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುವುದು ಗೊತ್ತಾಗಲಿದೆ. ಇದೇ ದಿನ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ, ಎ-8 ರವಿಶಂಕರ್ ಸೇರಿದಂತೆ ಉಳಿದ ಆರೋಪಿಗಳಿಗೆ ಜಾಮೀನು ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

Scroll to Top