ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ. 11. ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ ಸಂಸ್ಥೆಯ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Scroll to Top