ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, . 11.  ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.


ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇತ್ತೀಚೆಗೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿದ್ದು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹಲವು ಹುಲಿವೇಷ ತಂಡಗಳಿವೆ. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ, ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Also Read  ➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯ ಸುದ್ದಿಗಳು (ನವೆಂಬರ್ 16)

 

 

error: Content is protected !!
Scroll to Top