ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, . 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.


ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.

 

Also Read  ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

 

error: Content is protected !!
Scroll to Top