ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ

(ನ್ಯೂಸ್ ಕಡಬ)newskadaba.com,. 11 ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ ಭಾರತ ರಾಜ್ಯಗಳಿಗೆ ಒಟ್ಟಾರೆ 28,152 ಕೋಟಿ ರೂಪಾಯಿ ತೆರಿಗೆ ಪಾಲು ಕೊಡಲಾಗಿದೆ. ಆದರೆ ಉತ್ತರ ಪ್ರದೇಶ ರಾಜ್ಯವೊಂದಕ್ಕೆ 31,962 ಕೋಟಿ ರೂಪಾಯಿ ನೀಡಲಾಗಿದೆ. ನಮಗೆ ಈಗಾಗಲೇ ಆಗಿರುವ ಅನ್ಯಾಯವನ್ನಾದರೂ ಕನಿಷ್ಠ ಪಕ್ಷ ಸರಿದೂಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬಹುದಿತ್ತು. 2022 ರ ಕೇಂದ್ರ ಬಜೆಟ್ ಸಂದರ್ಭದಲ್ಲಿಯೇ ರಾಜ್ಯಗಳ ತೆರಿಗೆ ಪಾಲಿನ ತಾರತಮ್ಯದ ಬಗ್ಗೆ ನಾನು ದನಿಯೆತ್ತಿದ್ದೆ. ಅದರಲ್ಲೂ ಕರ್ನಾಟಕಕ್ಕೆ ಮತ್ತು ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದೆ” ಎಂದು ಹೇಳಿದರು.

Also Read  ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು

error: Content is protected !!
Scroll to Top