ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು:  ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ.

ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಭಾಗಗಳಲ್ಲಿ ವಾಡಿಕೆ ಪ್ರಮಾಣದ ಮಳೆ ಕಳೆದ ಹತ್ತು ದಿನಗಳಲ್ಲಿ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.14 ರಷ್ಟು ಕಡಿಮೆ ಮಳೆಯಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಶೇ.15, ಮಲೆನಾಡು ಶೇ.28 ಹಾಗೂ ಕರಾವಳಿ ಭಾಗದಲ್ಲಿ ಶೇ.16 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದೆ. ಅಲ್ಲದೆ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Also Read  ಮುಂಗಾರಿನ ಅಬ್ಬರಕ್ಕೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ

 

error: Content is protected !!
Scroll to Top