ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! – News Kadaba

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಗೋಕರ್ಣದಿಂದ ಡ್ರೈವರ್‌ ಮತ್ತು ಸಹ-ಡ್ರೈವರ್‌ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ.

Scroll to Top