ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com,. 11 ಬೆಳ್ತಂಗಡಿ : ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತ ಆದಿತ್ಯ ಭಟ್ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Also Read  ಪುತ್ತೂರು: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ➤ ರಿಕ್ಷಾ ಚಾಲಕನಿಗೆ ಗಾಯ

error: Content is protected !!
Scroll to Top